ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ವಿಶ್ವವ್ಯಾಪಿಯಾಗಿದ್ದು, ಭಾರತದಲ್ಲೂ ಇದು ತನ್ನ ಆರ್ಭಟವನ್ನು ನಡೆಸುತ್ತಿದೆ. ರಾಜ್ಯದಲ್ಲೂ ಕೊರೊನಾ ಅಬ್ಬರಿಸುತ್ತಿದ್ದು, ಈವರೆಗೆ 21 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಈವರೆಗೆ ಲಸಿಕೆ ಕಂಡು ಹಿಡಿದಿಲ್ಲವಾದ ಕಾರಣ ಭಯಭೀತರಾಗಿರುವ ಜನತೆ, ತಮ್ಮದೇ ಆದ ವಿಧಾನಗಳನ್ನು ಕಂಡುಕೊಂಡಿದ್ದಾರೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಸಲುವಾಗಿ ಗಿಡ ಮೂಲಿಕೆಗಳ ಕಷಾಯ ಸೇರಿದಂತೆ ಹಲವು ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ.
ಇದರ ಮಧ್ಯೆ ಕೆಲವರು ವಿಭೂತಿಯನ್ನು ತಮ್ಮ ಹಣೆಗೆ ಮಾತ್ರವಲ್ಲ ಮೈತುಂಬ ಬಳಿದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ವಿಭೂತಿ ಸೋಂಕು ತಡೆಯುವ ಶಕ್ತಿಯನ್ನು ಹೊಂದಿದೆ ಎಂಬ ಹಿನ್ನೆಲೆಯಲ್ಲಿ ಈ ವಿಧಾನ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗಿದೆ.