alex Certify ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ನೀತಿ; ಪ್ರಧಾನಿ ಅಂಧಾ ದರ್ಬಾರ್‌ನಿಂದ ಸಿಎಂ ಸ್ಪೂರ್ತಿ; ನೈಟ್ ಕರ್ಫ್ಯೂ ಕ್ರಮಕ್ಕೆ ಸಿದ್ದರಾಮಯ್ಯ ತರಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ನೀತಿ; ಪ್ರಧಾನಿ ಅಂಧಾ ದರ್ಬಾರ್‌ನಿಂದ ಸಿಎಂ ಸ್ಪೂರ್ತಿ; ನೈಟ್ ಕರ್ಫ್ಯೂ ಕ್ರಮಕ್ಕೆ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ…! ಭಲೇ ಜೋಡಿ…! ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ ಮುಖ್ಯಮಂತ್ರಿಗಳೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋ ಕಾಯ್ದೆ ರದ್ದು, ಟಿಪ್ಪು ಜಯಂತಿ ಆರಂಭ: ಸಿದ್ದರಾಮಯ್ಯ ಹೇಳಿಕೆ

ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಕೊರೊನಾ ಕರ್ಫ್ಯೂ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಇದ್ದರೆ ಆರೋಗ್ಯ ಸಚಿವ ಸುಧಾಕರ್ ಮೊದಲು ಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಬೇಕು. ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿಬರತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಸೂಕ್ತ ಕ್ರಮಕ್ಕೆ ಮುಂದಾಗಿ ಎಂದು ಹೇಳಿದ್ದಾರೆ.

ದೇಶದ ಪ್ರಧಾನಿ ಮೋದಿ ಅಂಧಾ ದರ್ಬಾರ್‌ನಿಂದ ಸಿಎಂ ಯಡಿಯೂರಪ್ಪ ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ, ಸ್ವಲ್ಪ ಬುದ್ದಿ ಕಲಿತು ಅವರಿಗೆ ಬುದ್ದಿ ಹೇಳಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...