ಬೆಂಗಳೂರು: ಕೊರೊನಾ ಹೊಸ ಪ್ರಭೇದ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ವೇಳೆ ಮಾತ್ರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ವಿಚಾರ ತೀವ್ರ ಟೀಕೆಗೆ ಗುರಿಯಾಗಿದೆ. ವಿಪಕ್ಷ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ.
ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಕಾಟಾಚಾರದ ರಾತ್ರಿ ಕರ್ಫ್ಯೂ ಹೇರಿ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ? ವಿವೇಕಯುತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವೇ ಇದು? ಈ ಸರ್ಕಾರಕ್ಕೆ ಅರಳು ಮರಳೋ? ಅಥವಾ ಸರ್ಕಾರ ನಡೆಸುವವರಿಗೆ ಅರಳು ಮರಳೋ? ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.