ಬೆಂಗಳೂರು: ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತ. ಈ ಲಸಿಕೆಗಳನ್ನು ಸಾರ್ವಜನಿಕರು ಯಾವುದೇ ಆತಂಕವಿಲ್ಲದೇ ಪಡೆದುಕೊಳ್ಳಬಹುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಸರಣಿ ಟ್ವಿಟ್ ಮಾಡಿರುವ ಸಚಿವರು, ಕೊರೊನಾ ಲಸಿಕೆಯ ಬಗ್ಗೆ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ, ಕೇವಲ ಸರ್ಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕು ಎಂದಿದ್ದಾರೆ.
GOOD NEWS: ಆಧಾರ್ ಕಾರ್ಡ್ ಮೂಲಕ ಕೆಲವೇ ಕ್ಷಣಗಳಲ್ಲಿ ತಯಾರಿಸಿ ಪಾನ್ ಕಾರ್ಡ್
ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ಪಡೆಯಬೇಕಿದ್ದು, ಎರಡನೇ ಡೋಸ್ ಪಡೆದ 14-15 ದಿನಗಳ ನಂತರ, ಅಂದರೆ, ಮೊದಲನೇ ಡೋಸ್ ಪಡೆದ ಸುಮಾರು 45 ದಿನಗಳ ನಂತರವಷ್ಟೇ ರೋಗ ನಿರೋಧಕ ಶಕ್ತಿ ಬರಲಿದೆ. ಈ ನಡುವೆ ಲಸಿಕೆ ಪಡೆದ ವ್ಯಕ್ತಿ ವೈರಾಣುವಿನ ಸಂಪರ್ಕಕ್ಕೆ ಬಂದಿದ್ದರೆ ಸೋಂಕು ತಗುಲುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದ್ದಾರೆ.
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯ 3369 ಹುದ್ದೆಗಳಿಗೆ ನೇಮಕಾತಿ
ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದ್ದು, ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ.