ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಪ್ರಧಾನಮಂತ್ರಿ ಸ್ವಾಸ್ಥ್ಯಸುರಕ್ಷಾ ಯೋಜನಾ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಕೋವಿಡ್ ಲಸಿಕೆ ಪಡೆದರು.
ಮಾ. 31 ರವರೆಗೆ ಶಾಲೆ, ಕಾಲೇಜ್ ಬಂದ್: 18 ವರ್ಷ ಮೇಲ್ಪಟ್ಟವರಿಗೆಲ್ಲ ಲಸಿಕೆ ನೀಡಲು ಪ್ರಸ್ತಾವನೆ
ಈ ವೇಳೆ ಮಾತನಾಡಿದ ಸಿಎಂ, ಇಂದು ನಾನು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದೇನೆ. ಈಗಾಗಲೇ ಪ್ರಧಾನಿ ಮೋದಿ ಹಾಗೂ ಅವರ ತಾಯಿ ಕೂಡ ಲಸಿಕೆ ಹಾಕಿಸಿಕೊಂಡಿದ್ದು, ಕೊರೊನಾ ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರು.