alex Certify ಕೊರೊನಾ ವಾರಿಯರ್ಸ್ ಎಂದು ಹಣೆಪಟ್ಟಿ; ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡದೇ ವಂಚನೆ; ರಾಜ್ಯ ಸರ್ಕಾರದ ವಿರುದ್ಧ ಹೆಚ್ ಡಿ ಕೆ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ವಾರಿಯರ್ಸ್ ಎಂದು ಹಣೆಪಟ್ಟಿ; ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡದೇ ವಂಚನೆ; ರಾಜ್ಯ ಸರ್ಕಾರದ ವಿರುದ್ಧ ಹೆಚ್ ಡಿ ಕೆ ಆಕ್ರೋಶ

ನಾನು ರಾಜಕೀಯದಲ್ಲಿರುವವರೆಗೂ ಜಿಟಿಡಿಯನ್ನ ಜೆಡಿಎಸ್ ಗೆ ಸೇರಿಸಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ... - Just Kannada | Online Kannada News | Breaking Kannada News ...

ಬೆಂಗಳೂರು: ಕೊರೊನಾ ನಿರ್ವಹಣೆಯಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಕೋವಿಡ್ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿ, ಅವರಿಗೆ ಗೌರವಧನವನ್ನೂ ನೀಡದೇ ರಾಜ್ಯ ಸರ್ಕಾರ ಅವರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜನರೇಟರ್ ಸ್ಫೋಟ:‌ ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕೊಠಡಿ

ಕಳೆದ ಮೂರು ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ 3 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇಕಡಾ 50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ. ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಿಸಿದ 16 ಮಂದಿ ಆಶಾ ಕಾರ್ಯಕರ್ತೆಯರು ಈ ವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೋನಾ ವೈರಸ್‌ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

WHO ಅನುಮೋದನೆ ಇಲ್ಲದಿದ್ರೂ ಕೊವ್ಯಾಕ್ಸಿನ್ ಬಳಕೆ: 2 ಕೋಟಿ ಮಂದಿಗೆ ವ್ಯಾಕ್ಸಿನ್ ಕೊಟ್ಟ ನಂತರ ಅಪ್ರೂವಲ್ ಗೆ ದುಂಬಾಲು

ಕೊರೋನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ದುಡಿದವರಿಗೆ ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ 1250 ಕೋಟಿ ರೂ.ಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ ಎಂಬುದು ಭ್ರಮೆ ಅಲ್ಲದೇ ಮತ್ತೇನು? ಪ್ರಾಣದ ಹಂಗು ತೊರೆದು ಕೋವಿಡ್ ನಿರ್ವಹಣೆಗೆ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಗೌರವಧನವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...