alex Certify ಕೊರೊನಾ ಸಂದರ್ಭದಲ್ಲಿ ಶಿಕ್ಷಕರಿಗೆ ನೆಮ್ಮದಿ ನೀಡಿದ ರಾಜ್ಯ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸಂದರ್ಭದಲ್ಲಿ ಶಿಕ್ಷಕರಿಗೆ ನೆಮ್ಮದಿ ನೀಡಿದ ರಾಜ್ಯ ಸರ್ಕಾರ

ಮಹಾಮಾರಿ ಕೊರೊನಾ ದಿನೇ ದಿನೇ ವ್ಯಾಪಕವಾಗುತ್ತಿದ್ದು, ಇದರ ಮಧ್ಯೆಯೂ ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆಯನ್ನು ಆರಂಭಿಸಿತ್ತಲ್ಲದೇ, ಮಧ್ಯಂತರ ರಜೆಯನ್ನೂ ರದ್ದು ಮಾಡಿತ್ತು.

ಆದರೆ ವಿದ್ಯಾಗಮ ಯೋಜನೆಯಡಿ ವಠಾರ ಶಾಲೆಯಲ್ಲಿ ಕಲಿಯುತ್ತಿದ್ದ ಹಲವು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದ್ದು, ಜೊತೆಗೆ ಕೆಲ ಶಿಕ್ಷಕರು ಸಹ ಈ ಮಹಾಮಾರಿಗೆ ಬಲಿಯಾಗಿದ್ದ ಸಂಗತಿ ಬೆಳಕಿಗೆ ಬಂದಿತ್ತು.

ಹೀಗಾಗಿ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಲು ಹಾಗೂ ಮಧ್ಯಂತರ ರಜೆಯನ್ನು ನೀಡಲು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಸ್ಪಂದಿಸಿರುವ ಸರ್ಕಾರ ಈಗ ಅಕ್ಟೋಬರ್ 12 ರಿಂದ 30ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆಯನ್ನು ಘೋಷಿಸಿದೆಯಲ್ಲದೆ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...