alex Certify ಕೊರೊನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯರನ್ನು ಹೊರಗಟ್ಟಿದ ಮನೆ ಮಾಲೀಕ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯರನ್ನು ಹೊರಗಟ್ಟಿದ ಮನೆ ಮಾಲೀಕ…!

ಕೊರೊನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದರೆಂಬ ಕಾರಣಕ್ಕೆ ಮಾಲೀಕನೊಬ್ಬ ತನ್ನ ಮನೆಯಲ್ಲಿದ್ದ ವೈದ್ಯರನ್ನು ರಾತ್ರೋರಾತ್ರಿ ಮನೆಯಿಂದ ಹೊರಗಟ್ಟಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ಮೂರು ದಿನಗಳ ಹಿಂದೆ ಈ ವೈದ್ಯರು ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬನಿಗೆ ಚಿಕಿತ್ಸೆ ನೀಡಿದ್ದು, ಬಳಿಕ ಆ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಲ್ಯಾಬ್ ಟೆಕ್ನಿಷಿಯನ್ ಬಾಡಿಗೆಗೆ ಪಡೆದಿದ್ದ ಮನೆಯಲ್ಲಿ ಆತನ ಜೊತೆ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು.

ಈ ಮಾಹಿತಿ ತಿಳಿದ ಮನೆ ಮಾಲೀಕ ಶುಕ್ರವಾರ ರಾತ್ರಿ ಮನೆ ಬಳಿಬಂದು ವೈದ್ಯರು ಹಾಗೂ ಲ್ಯಾಬ್ ಟೆಕ್ನಿಷಿಯನ್ ಗೆ ನಿಂದಿಸಿ ರಾತ್ರೋರಾತ್ರಿ ಮನೆ ಖಾಲಿ ಮಾಡಿಸಿದ್ದಾರೆ. ಬಳಿಕ ವೈದ್ಯರು ಲ್ಯಾಬ್ ಟೆಕ್ನಿಷಿಯನ್ ಜೊತೆ ಲಾಡ್ಜ್ ಒಂದರಲ್ಲಿ ಉಳಿದುಕೊಂಡರೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...