ಬೆಂಗಳೂರು: ರಾಜ್ಯದಲ್ಲಿ ರೂಪಾಂತರ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸುವಂತೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಕೊರೋನಾ ಅಪಾಯ ಇನ್ನೂ ತಗ್ಗಿಲ್ಲ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸುರಕ್ಷಿತವಾಗಿರಿ ಎಂದು ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ 7 ಜನರಲ್ಲಿ ಕೊರೊನಾ ರೂಪಾಂತರ ವೈರಸ್ ಪತ್ತೆಯಾಗಿದ್ದು, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕೋವಿಡ್ ಹರಡದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.