alex Certify ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಸರ್ವಪಕ್ಷಗಳ ಸಭೆ ಕರೆದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಸರ್ವಪಕ್ಷಗಳ ಸಭೆ ಕರೆದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಸಹಕರಿಸದಿದ್ದಲ್ಲಿ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವಪಕ್ಷ ಸಭೆ ಕರೆಯಲಾಗುವುದು. ಏಪ್ರಿಲ್ 18, 19ರಂದು ಸಭೆ ಕರೆದು ಚರ್ಚಿಸಿಸಲಾಗುವುದು. ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲರೊಂದಿಗೂ ಚರ್ಚಿಸಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಕೊರೊನಾ 2 ನೇ ಅಲೆ ಆತಂಕದ ನಡುವೆಯೂ ಜನತೆಯಿಂದ ಹಬ್ಬಕ್ಕೆ ಭರ್ಜರಿ ಖರೀದಿ

ಕೊರೊನಾ ಕುರಿತಾಗಿ ಜನರು ಹೆಚ್ಚು ಜಾಗೃತರಾಗಿರಬೇಕು. ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಬೇಕು. ಜನರು ಸಹಕರಿಸದಿದ್ದರೆ ಅನಿವಾರ್ಯವಾಗಿ ಲಾಕ್ ಡೌನ್ ಮೊರೆ ಹೋಗಬೇಕಾದ ಸ್ಥಿತಿ ಬರಬಹುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...