ಬೆಂಗಳೂರು: ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಸಂಧಾನ ಸಭೆ ಯಶಸ್ವಿಯಾದ ಬೆನ್ನಲ್ಲೇ ಮುಷ್ಕರ ವಾಪಸ್ ಪಡೆದು ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ನಿನ್ನೆ ಘೋಷಿಸಲಾಗಿತ್ತು. ಆದರೆ ಸಾರಿಗೆ ನೌಕರರ ಹೋರಾಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ಮುಂದುವರೆದಿದ್ದು, ಕೋಡಿಹಳ್ಳಿ ರಾಜ್ಯ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ಕಾಂಗ್ರೆಸ್ ನಾಯಕರ ಬೆಂಬಲದಿಂದಾಗಿ ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿ, ಅವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದರ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸಿ.ಟಿ. ರವಿ ಕೋಡಿಹಳ್ಳಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ.ರವಿ, ಕೋಡಿ’ಹುಳಿ’ಅನ್ನು ಬಳಸಿಕೊಂಡು ಕೆಲ ನಾಯಕರು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಆದರೆ ಅವರ ಕನಸು ಕನಸಾಗಿಯೇ ಉಳಿಯುತ್ತದೆ ಎಂದು ಹೇಳಿದ್ದಾರೆ.