ದೇವರ ಸೇವೆಗೆಂದು ಚೀಲದಲ್ಲಿ ಕೋಳಿ ತೆಗೆದುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕಂಡಕ್ಟರ್, ಕೋಳಿಗೂ ಫುಲ್ ಚಾರ್ಜ್ ಟಿಕೆಟ್ ನೀಡಿದ ಕಾರಣಕ್ಕೆ ಕಕ್ಕಾಬಿಕ್ಕಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ದೈವಾರಾಧನೆ ಕ್ಷೇತ್ರಕ್ಕೆ ಅಗೇಲು ಸೇವೆ ಸಲ್ಲಿಸಲು ಈ ವ್ಯಕ್ತಿ ಕೈಚೀಲದಲ್ಲಿ ಕೋಳಿ ತೆಗೆದುಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ ಕಂಡಕ್ಟರ್ ಪ್ರಯಾಣಿಕನಿಗೆ ವಿಧಿಸಿದ 50 ರೂಪಾಯಿ ದರದ ಟಿಕೆಟ್ ನ್ನೇ ಕೋಳಿಗೂ ನೀಡಿದ್ದಾರೆ.
ವಾಹನ ಸವಾರರಿಗೆ ಬಿಗ್ ಶಾಕ್: ಸುಂಕ ಇಳಿಕೆ ಇಲ್ಲವೆಂದ ಸರ್ಕಾರ – ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ದುಬಾರಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಈ ಕ್ರಮಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಟೀಕಿಸಿದ್ದು, ಆತನೇನು ಕುರಿ ಅಥವಾ ದನ ಒಯ್ಯುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿಭಾಗೀಯ ಸಂಚಲನಾಧಿಕಾರಿ ಮುರಳಿಧರ್, ಒಂದು ಕೋಳಿಗೆ ಒಬ್ಬ ಪ್ರಯಾಣಿಕನಷ್ಟೇ ದರ ವಿಧಿಸಬೇಕು ಎಂಬ ನಿಯಮವಿದೆ. ಹಾಗಾಗಿ ಅದನ್ನು ಪಾಲಿಸಲಾಗಿದೆ ಎಂದು ತಿಳಿಸಿದ್ದಾರೆ.