ಕೊರೊನಾ ಎಂದರೆ ಎಲ್ಲರೂ ಬೆಚ್ಚಿ ಬೀಳುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು, ಹಾಡೊಂದಕ್ಕೆ ಭರ್ಜರಿ ಸ್ಟೆಪ್ ಹಾಕುವ ಮೂಲಕ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಡ್ಯದ ಕೋವಿಡ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ – ಮತದಲ್ಲಿ ಮೇಲ್ಯಾವುದೋ’ ಹಾಡಿಗೆ ಕೆಲವರು ಕುಣಿದಿದ್ದು, ಇದರ ವಿಡಿಯೋವನ್ನು ಈಗ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ. ಇವರುಗಳ ನೃತ್ಯಕ್ಕೆ ಅಲ್ಲಿ ಕೆಲಸ ಮಾಡುವ ಸಿಬ್ಬಂದಿಯೂ ಪ್ರೋತ್ಸಾಹ ನೀಡಿದ್ದು ವಿಶೇಷ.
ಜೊತೆಗೆ ಆಸ್ಪತ್ರೆಯ ಅಚ್ಚುಕಟ್ಟಾದ ವ್ಯವಸ್ಥೆ ಕುರಿತು ಸೋಂಕಿತರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಊಟ – ತಿಂಡಿಯಲ್ಲಿ ನಮಗೆ ಯಾವುದೇ ಕೊರತೆ ಎದುರಾಗಿಲ್ಲ. ಕೊರೊನಾ ಸೋಂಕು ಕಾಣಿಸಿಕೊಂಡರೆ ಸಾರ್ವಜನಿಕರು ಹೆದರಬೇಕಾಗಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.