ಬೆಂಗಳೂರು: ಒಂದೆಡೆ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇನ್ನೊಂದೆಡೆ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೂ ಕೂಡ ಎಚ್ಚೆತ್ತುಕೊಳ್ಳದ ಜನರು ಮಾತ್ರ ತಮ್ಮ ಬೇಜವಾಬ್ದಾರಿ ಮುಂದುವೆರೆಸಿದ್ದಾರೆ. ಇಂತವರ ವಿರುದ್ಧ ಕ್ರಮ ಕೈಗೊಂಡಿರುವ ಸರ್ಕಾರ ಭಾರಿ ಪ್ರಮಾಣದಲ್ಲಿ ದಂಡ ವಸೂಲಿ ಮಾಡಿದೆ.
ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ ಹಾಗೂ ಮಾಸ್ಕ್, ದೈಹಿಕ ಅಂತರ ಸೇರಿದಂತೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡಿರುವ ಬಿಬಿಎಂಪಿ ಕಳೆದ 10 ದಿನಗಳಲ್ಲಿ 1 ಲಕ್ಷದ 60 ಸಾವಿರ ರೂ. ದಂಡ ವಸೂಲಿ ಮಾಡಿದೆ.
ಆಸ್ಪತ್ರೆಯಲ್ಲೇ ಮದುವೆ ಮಾಡಿಕೊಂಡ ‘ಕೊರೊನಾ’ ಸೋಂಕಿತ….!
ಬೆಂಗಳೂರಿನಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಬೇಜವಾಬ್ದಾರಿಯಿಂದ ವರ್ತಿಸಿದವರಿಗೆ ಮಾರ್ಷಲ್ ಗಳ ಮೂಲಕ ದಂಡ ವಿಧಿಸಲಾಗುತ್ತಿದ್ದು, ಕಳೆದ 10 ದಿನಗಳಲ್ಲಿ 1,60,000 ರೂ. ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದ ರಿಲಾಯನ್ಸ್, ಡಿ ಮಾರ್ಟ್ ಸೇರಿದಂತೆ ಹಲವು ಶಾಪಿಂಗ್ ಮಾಲ್ ಗಳಿಂದಲೂ ದಂಡ ಸಂಗ್ರಹಿಸಲಾಗಿದೆ.