ಬೆಂಗಳೂರು: ರಾಜ್ಯದ ಜನತೆಗೆ ದಸರಾ ಹಬ್ಬದ ಶುಭಾಷಗಳು. ಕೊವಿಡ್ ನಿಯಮ ಪಾಲಿಸಿ ರಾಜ್ಯದ ಜನರು ದಸರಾ ಹಬ್ಬವನ್ನು ಆಚರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ ಜನತೆಗೆ ದಸರಾ ಹಬ್ಬದ ಶುಭಾಷಯಗಳು. ಚಾಮುಂಡೇಶ್ವರಿ ತಾಯಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ. ಎಲ್ಲರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿಯನ್ನು ತರಲಿ ಎಂದು ಹಾರೈಸಿದರು.
ಇದೇ ವೇಳೆ ರಾಜ್ಯದಲ್ಲಿನ ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳು ಬರದಿಂದ ಸಾಗಿವೆ. ಪ್ರವಾಹ ಸಂತ್ರಸ್ತರಿಗೆ ಯವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಗತ್ಯ ಬಿದ್ದರೆ ಮತ್ತೊಮ್ಮೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.