ದೇಶದಲ್ಲಿ ಉದ್ಭವಿಸಿರುವ ಕೊರೊನಾ ಸಂಕಷ್ಟದ ಪರಿಸ್ಥಿತಿಯನ್ನು ದೇಶ ವಿರೋಧಿ ಶಕ್ತಿಗಳು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ, ಈ ಕುರಿತು ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪ್ರಸ್ತುತ ಆರಂಭವಾಗಿರುವ ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ದೇಶವಿರೋಧಿ ಶಕ್ತಿಗಳು ನಕಾರಾತ್ಮಕ ಹಾಗೂ ಅಪ ನಂಬಿಕೆ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿವೆ ಎಂದು ಹೇಳಿದ್ದಾರೆ.
ಕೊರೋನಾ ಬಿಗ್ ಶಾಕ್: ರೈಲ್ವೇಯ ಬರೋಬ್ಬರಿ 93 ಸಾವಿರ ಉದ್ಯೋಗಿಗಳಿಗೆ ಸೋಂಕು ದೃಢ
ಹೀಗಾಗಿ ಮಾಧ್ಯಮಗಳು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳು ಸಕಾರಾತ್ಮಕ ವಾತಾವರಣ ನಿರ್ಮಿಸಲು ಹಾಗೂ ಭರವಸೆ ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ತಿಳಿಸಿದ್ದು, ಇಂತಹ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು, ಸಾಮಾಜಿಕ ಹಾಗೂ ಧಾರ್ಮಿಕ ಸಂಸ್ಥೆಗಳು ಕೂಡಾ ಈ ಕಾರ್ಯಕ್ಕೆ ಮುಂದಾಗಬೇಕು ಎಂದಿದ್ದಾರೆ.