ಕೊರೊನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವ್ಯಾಪಾರ – ವಹಿವಾಟುಗಳು ಬಂದ್ ಆಗಿದ್ದವು. ಆ ಬಳಿಕ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಹೀಗಾಗಿ ಕೆಲವೊಂದು ವಹಿವಾಟು ಆರಂಭವಾಗಿದ್ದವು.
ಆದರೆ ಬಹುಕಾಲದವರೆಗೆ ಪೂರ್ಣಪ್ರಮಾಣದಲ್ಲಿ ಹೋಟೆಲ್ ಆರಂಭಿಸಲು ಅನುಮತಿ ನೀಡಿರಲಿಲ್ಲ. ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಲಾಗಿದ್ದು, ಕೆಲದಿನಗಳ ಇಂದಿನಿಂದ ಅಷ್ಟೇ ಕೆಲವೊಂದು ನಿರ್ಬಂಧಗಳನ್ನು ಪೂರ್ಣಪ್ರಮಾಣದಲ್ಲಿ ಹೋಟೆಲ್, ರೆಸಾರ್ಟ್, ಹೋಂ ಸ್ಟೇ, ರೆಸ್ಟೋರೆಂಟ್ ಆರಂಭಿಸಲು ಅನುಮತಿ ನೀಡಲಾಗಿದೆ.
ಇದರ ಮಧ್ಯೆ ಕೊಡಗು ಜಿಲ್ಲಾ ಹೋಟೆಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಹಾಗೂ ಹೋಂ ಸ್ಟೇ ಅಸೋಸಿಯೇಷನ್ ಮಹತ್ವದ ತೀರ್ಮಾನ ಕೈಗೊಂಡಿದ್ದು, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಟೆಲ್, ರೆಸಾರ್ಟ್ ಹಾಗೂ ಹೋಂ ಸ್ಟೇಗಳನ್ನು ಮತ್ತೆ 21ದಿನಗಳ ಕಾಲ ಬಂದ್ ಮಾಡಲು ತೀರ್ಮಾನಿಸಲಾಗಿದೆ.