ಮಂಡ್ಯ: ಅತ್ಯಾಚಾರ ಆರೋಪಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೀಲಾರ ಗ್ರಾಮದ ಕುಮಾರ್ ತಪ್ಪಿಸಿಕೊಂಡು ಪರಾರಿಯಾಗಿರುವ ಆರೋಪಿ. ಆರೋಪಿ ಕುಮಾರ್ ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಈ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಆದರೆ ಅವನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆರೋಪಿ ಕುಮಾರ್ ಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಯ ಜೈಲು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೊರೊನಾ ಸೋಂಕಿನಿಂದ ಗುಣಮುಖನಾದ ಹಿನ್ನಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.