ಮೈಸೂರು: ರಾಜಧಾನಿ ಬೆಂಗಳೂರಿನಂತೆಯೇ ಮೈಸೂರು, ಹುಬ್ಬಳ್ಳಿ ನಗರಗಳಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಕಂಠೀರವ ಕ್ರೀಡಾಂಗಣ 1500 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಾಡುತ್ತಿದ್ದೇವೆ. ಅದೇ ರೀತಿ ಮೈಸೂರು, ಹುಬ್ಬಳ್ಳಿಯಲ್ಲಿಯೂ ಅಂತಾರಾಷ್ಟ್ರೀಯ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಬಗ್ಗೆ ಚರ್ಚೆ ನಡೆದಿದೆ ಎಂದರು.
ಮನೆ, ನಿವೇಶನ ಇಲ್ಲದವರಿಗೆ ಗುಡ್ ನ್ಯೂಸ್
ಪಿಪಿಪಿ ಯೋಜನೆಯಡಿ ಜಿಲ್ಲಾ ಕೇಂದ್ರಗಳಲ್ಲೂ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಕೆಲಸ ನಡೆಯಲಿದೆ. ಈ ಬಾರಿ ಬಜೆಟ್ ನಲ್ಲಿ ಕ್ರೀಡಾ ಇಲಾಖೆಗೂ ಸಾಕಷ್ಟು ಅನುದಾನ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.