alex Certify ಖಾಸಗಿ ಆಸ್ಪತ್ರೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅಡ್ಡಿಯಾಗಿದೆ ಸರ್ಕಾರದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಆಸ್ಪತ್ರೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅಡ್ಡಿಯಾಗಿದೆ ಸರ್ಕಾರದ ಕ್ರಮ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದವು. ಆ ಬಳಿಕ ಕೊರೊನಾ ಹೊರತುಪಡಿಸಿ ಇತರೆ ಕಾಯಿಲೆಗಳಿಗೆ ಚಿಕಿತ್ಸೆ ಸಿಗಬೇಕೆಂಬ ಉದ್ದೇಶದಿಂದ ಖಾಸಗಿ ಆಸ್ಪತ್ರೆಗಳನ್ನು ತೆರೆಯಲು ಆದೇಶಿಸಲಾಗಿತ್ತು.

ಈ ಆದೇಶದ ಬಳಿಕವೂ ಖಾಸಗಿ ಆಸ್ಪತ್ರೆಗಳನ್ನು ತೆರೆಯಲು ಹಿಂದೇಟು ಹಾಕಲಾಗುತ್ತಿದೆ. ಕೆಲವರು ಆಸ್ಪತ್ರೆ ತೆರೆದರೂ ಸಹ ಹಿಂಜರಿಕೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಪರಿಸ್ಥಿತಿ ಇದೆ. ಇದಕ್ಕೆ ಕಾರಣವಾಗುತ್ತಿರುವುದು ಸರ್ಕಾರ ತೆಗೆದುಕೊಂಡಿರುವ ಕ್ರಮ ಎಂಬ ಮಾತುಗಳು ಕೇಳಿಬರುತ್ತಿವೆ.

ಒಂದೊಮ್ಮೆ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದರೆ ಅಂತಹ ಆಸ್ಪತ್ರೆಗಳನ್ನು ಸರ್ಕಾರ ಮುಚ್ಚಿಸುತ್ತದೆ. ಜೊತೆಗೆ ಅಲ್ಲಿನ ವೈದ್ಯರು ಹಾಗೂ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗುತ್ತದೆ. ಆದರೆ ತಮ್ಮಲ್ಲಿಗೆ ಬರುವ ರೋಗಿ ಕೊರೊನಾ ಸೋಂಕು ಹೊಂದಿರುವುದು ಮುಂಚಿತವಾಗಿಯೇ ನಮಗೆ ಹೇಗೆ ತಿಳಿಯುತ್ತದೆ ಎಂಬುದು ಖಾಸಗಿ ಆಸ್ಪತ್ರೆಗಳ ವೈದ್ಯರ ಪ್ರಶ್ನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...