ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಆರಂಭಿಸುವ ಕುರಿತು ಅನುಮತಿ ನೀಡಲು ನಿರ್ಧರಿಸಿದೆ.
ಮುಂದಿನ ದಿನಗಳಲ್ಲಿ ಸೋಂಕು ಪೀಡಿತರ ಸಂಖ್ಯೆ ಭಾರಿ ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸರ್ಕಾರಿ ವ್ಯವಸ್ಥೆ ಮೂಲಕವೇ ಅದನ್ನು ನಿರ್ವಹಿಸುವುದು ಕಷ್ಟಕರವಾಗಲಿದೆ ಎಂಬ ಕಾರಣಕ್ಕಾಗಿ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.
ಸೋಂಕು ಪೀಡಿತರಿಗೆ ಹೊರೆಯಾಗದಂತೆ ಶುಲ್ಕ ನಿಗದಿಪಡಿಸುವ ಕುರಿತು ಚರ್ಚೆ ನಡೆದಿದ್ದು, ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ. ಸ್ವತಃ ವೈದ್ಯ ಶಿಕ್ಷಣ ಸಚಿವ ಡಾ. ಸುಧಾಕರ್, ಖಾಸಗಿ ಆಸ್ಪತ್ರೆಗೆ ಅನುಮತಿ ನೀಡುವ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.