ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಬ್ಬರಿಸುತ್ತಿದ್ದು, ಒಂದೇ ದಿನ ದಾಖಲೆಯ 26,962 ಪ್ರಕರಣಗಳು ಪತ್ತೆಯಾಗಿವೆ. ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ.
ಜೊತೆಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಮಧ್ಯೆ ಕೆಲ ಖಾಸಗಿ ಆಸ್ಪತ್ರೆಗಳು ಕೋವಿಡ್ ಹೊರತಾದ ಇತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳಿಂದ ಕೋವಿಡ್ ನೆಗೆಟಿವ್ ವರದಿ ನೀಡುವಂತೆ ಕೇಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.
ಬೆಚ್ಚಿಬೀಳಿಸುವಂತಿದೆ ʼಕೊರೊನಾʼ ಸಂದರ್ಭದಲ್ಲಿ ಬೆಳಕಿಗೆ ಬಂದಿರುವ ಈ ಘಟನೆ
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಕೊರೊನಾ ಲಕ್ಷಣ ಇಲ್ಲದ ಯಾವುದೇ ರೋಗಿಯಿಂದ ಕೋವಿಡ್ ನೆಗೆಟಿವ್ ವರದಿಯನ್ನು ಕೇಳಬಾರದು ಎಂದು ತಿಳಿಸಿದೆ. ಇದರಿಂದಾಗಿ ಕೊರೊನಾ ಹೊರತಾದ ಇತರೆ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನಗತ್ಯ ವಿಳಂಬ ತಪ್ಪಿದಂತಾಗಿದೆ.