ರಾಜ್ಯದಲ್ಲಿ 1995 ರಿಂದ 2000ನೇ ಇಸವಿ ನಡುವೆ ಆರಂಭವಾಗಿರುವ ಖಾಸಗಿ ಕನ್ನಡ ಶಾಲೆಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ ನೀಡಿದ್ದಾರೆ. ಈ ಐದು ವರ್ಷಗಳ ಅವಧಿಯಲ್ಲಿ ಆರಂಭವಾಗಿರುವ ಒಟ್ಟು 685 ಪ್ರಾಥಮಿಕ ಮತ್ತು 211 ಪ್ರೌಢ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಈ ಶಾಲೆಗಳನ್ನು ಅನುದಾನಕ್ಕೊಳಪಡಿಸಲು ಒಟ್ಟು 138.39 ಕೋಟಿ ರೂಪಾಯಿಗಳ ಅಗತ್ಯವಿದೆ ಎಂಬ ಅಂದಾಜನ್ನು ಶಿಕ್ಷಣ ಇಲಾಖೆ ಮಾಡಿದ್ದು, ಈಗಾಗಲೇ ಸುರೇಶ್ ಕುಮಾರ್ ಅವರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ 150 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಿ ಆದೇಶಿಸುವಂತೆ ಕೋರಿ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಬದಲಾಯ್ತು CBSE 6 -10 ನೇ ತರಗತಿ ಕಲಿಕಾ ವಿಧಾನ, ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಈ ಹಿಂದೆ ಯಡಿಯೂರಪ್ಪನವರ ನೇತೃತ್ವದ ಸರ್ಕಾರ 2008ರಲ್ಲಿ ಅಧಿಕಾರಕ್ಕೆ ಬಂದ ವೇಳೆ 1990 ರಿಂದ 1995 ರವರೆಗಿನ ಐದು ವರ್ಷಗಳ ಅವಧಿಯಲ್ಲಿ ಆರಂಭಗೊಂಡ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಇದೀಗ ಒಟ್ಟು 896 ಖಾಸಗಿ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.