alex Certify ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಿಸದೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಿಸದೆ ಸಾವು

ಹುಬ್ಬಳ್ಳಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸುನೀಲ್ ಮೃತ ಕ್ಯಾಮರಾಮನ್. ಕಳೆದ ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯ ಚಾಟ್ನಿ ಕಾಂಪ್ಲೆಕ್ಸ್ ಬಳಿ ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಮರಾಮನ್ ಸುನೀಲ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸುನೀಲ್ ತಲೆ ಹಾಗೂ ಮುಖಕ್ಕೆ ಗಂಭೀರವಾದ ಗಾಯಗಳಾಗಿದ್ದವು. ಇದೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸುನೀಲ್ ಅವರಿಗೆ ಡಿಸೆಂಬರ್ ತಿಂಗಳಿನಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೀಗ ಅಪಘಾತದಲ್ಲಿ ಸಾವನ್ನಪ್ಪಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...