ಕೊರೊನಾ ಮಹಾಮಾರಿ ಮತ್ತೆ ಅಬ್ಬರಿಸುತ್ತಿದೆ. ರಾಜ್ಯದಲ್ಲಿ ಎರಡನೇ ಅಲೆಯ ಭೀತಿ ಕೂಡ ಎದುರಾಗಿದೆ. ಅಷ್ಟೆ ಯಾಕೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಇತ್ತ ಸರ್ಕಾರ ಕೂಡ ಕಠಿಣ ಕ್ರಮಗಳನ್ನು ತೆಗೆಕೊಳ್ಳುವ ನಿಟ್ಟಿನಲ್ಲಿ ಸಭೆಗಳನ್ನು ನಡೆಸುತ್ತಿದೆ. ಈ ಬೆನ್ನಲ್ಲೇ ಇದೀಗ ಗಣಿ ನಾಡಿನಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ.
ಹೌದು, ಬಳ್ಳಾರಿಯ ವಿಮ್ಸ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಪೈಕಿ ಪ್ರಥಮ ವರ್ಷದ ಎಂಬಿಬಿಎಸ್ ಓದುತ್ತಿರುವ 14 ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಒಟ್ಟು 100 ವಿದ್ಯಾರ್ಥಿಗಳಿಗೆ ಟೆಸ್ಟ್ ಮಾಡಿಸಿದಾಗ ಆ ಪೈಕಿ 14 ವಿದ್ಯಾರ್ಥಿಗಳಿಗೆ ಸೋಂಕು ಧೃಡವಾಗಿದೆ. ಇನ್ನುಳಿದ ವಿದ್ಯಾರ್ಥಿಗಳ ವರದಿ ನೆಗೆಟಿವ್ ಬಂದಿದೆ.
ಒಂದೇ ಕಾಲೇಜಿನ 149 ವಿದ್ಯಾರ್ಥಿಗಳಿಗೆ ಕೊರೊನಾ ದೃಢ – ಹಾಸ್ಟೆಲ್ ಮುಂದೆ ಪೋಷಕರ ಪ್ರತಿಭಟನೆ
ಸೀನಿಯರ್ ಬ್ಯಾಚ್ ಗಳಿಗೆ ಪರಿಕ್ಷೆ ಇರುವ ಹಿನ್ನೆಲೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ತಮ್ಮ ಸ್ವಗ್ರಾಮಗಳಿಗೆ ತೆರಳಿದ್ದರು. ಈ ವಿದ್ಯಾರ್ಥಿಗಳು ಕಾಲೇಜಿಗೆ ವಾಪಸ್ಸಾದ ಬಳಿಕ ಕೆಲವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಇದರಲ್ಲಿ 14 ವಿದ್ಯಾರ್ಥಿಗಳಿಗೆ ಕೋವಿಡ್ ದೃಢವಾಗಿದೆ. ಇನ್ನು ಸೋಂಕು ತಗಲಿರುವ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.