ಗಾಂಧಿ ಜಯಂತಿ ಸೇರಿದಂತೆ ಗಣ್ಯರ ಜಯಂತಿಗಳಂದು ಶಾಲಾ – ಕಾಲೇಜುಗಳಿಗೆ ನೀಡುತ್ತಿದ್ದ ರಜೆಯನ್ನು ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಲಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ.
ಹೌದು, ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್. ದೊರೆಸ್ವಾಮಿ ಇಂತಹುದೊಂದು ಶಿಫಾರಸ್ಸನ್ನು ರಾಜ್ಯ ಸರ್ಕಾರಕ್ಕೆ ಮಾಡಿದ್ದು, ಶಾಲಾ – ಕಾಲೇಜುಗಳಿಗೆ ರಜೆ ನೀಡುವ ಬದಲು ಗಣ್ಯ ವ್ಯಕ್ತಿಗಳ ಕುರಿತು ಉಪನ್ಯಾಸ ಕಾರ್ಯಾಗಾರಗಳನ್ನು ಆಯೋಜಿಸಿದರೆ ಗಣ್ಯರ ಜಯಂತಿಗಳಿಗೆ ಅರ್ಥ ಬರುತ್ತದೆ ಎಂದು ಹೇಳಿದ್ದಾರೆ.
ಅಲ್ಲದೆ, ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಶೀಘ್ರದಲ್ಲೇ ನಡೆಸಬೇಕೆಂದು ದೊರೆಸ್ವಾಮಿ ಸಲಹೆ ನೀಡಿದ್ದು, ಬಹಳಷ್ಟು ವಿದ್ಯಾರ್ಥಿಗಳು ಈಗಾಗಲೇ ಹಲವು ಸಂಸ್ಥೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಅವರುಗಳಿಗೆ ಅಂತಿಮ ಸೆಮಿಸ್ಟರ್ ಅಂಕಪಟ್ಟಿ ಅಗತ್ಯವಿರುವುದರಿಂದ ಸರ್ಕಾರ, ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದಿದ್ದಾರೆ.