ದೇಶದಲ್ಲಿ ಕೊರೊನಾ ಕಾಣಿಸಿಕೊಂಡ ಬಳಿಕ ಶಾಲಾ-ಕಾಲೇಜುಗಳು ಸಂಪೂರ್ಣ ಬಂದ್ ಆಗಿದ್ದು, ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಮತ್ತೊಮ್ಮೆ ಆದೇಶ ಹೊರಡಿಸಿದೆ.
ಆಗಸ್ಟ್ 31ರವರೆಗೆ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಈ ಆದೇಶದಲ್ಲಿ ತಿಳಿಸಲಾಗಿದೆ.
ಆದರೆ, ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಆಗಮಿಸಿ ವಿದ್ಯಾಗಮ ಮಾರ್ಗದರ್ಶಿ ಸೂತ್ರಗಳ ಅನ್ವಯ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದ್ದು, ವಿದ್ಯಾಗಮ ಯೋಜನೆಯನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ.