ರಾಜ್ಯಕ್ಕೆ ಈಗಾಗಲೇ ಮುಂಗಾರು ಕಾಲಿಟ್ಟಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಾದ್ಯಂತ ಮಳೆಯಾಗುತ್ತಿದೆ. ಜಲಾಶಯ, ಕೆರೆಕಟ್ಟೆಗಳು ತುಂಬಲಾರಂಭಿಸಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದಾರೆ.
ಇದರ ಮಧ್ಯೆ ಮಳೆ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಜೋರಾಗಿರುವ ಕಾರಣ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಬಳಿಕ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಕೋಲಾರದಲ್ಲಿ ಜೂನ್ 27ರಂದು ಮಳೆ ಆರ್ಭಟ ಜೋರಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಣೆ ಮಾಡಲಾಗಿದೆ.