alex Certify ಗಮನಿಸಿ: ಹೈಕೋರ್ಟ್ ರಜೆ ಜೂನ್ 6ರ ವರೆಗೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಹೈಕೋರ್ಟ್ ರಜೆ ಜೂನ್ 6ರ ವರೆಗೆ ವಿಸ್ತರಣೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಹೈಕೋರ್ಟಿಗೆ ಮೇ 16ರ ವರೆಗೆ ರಜೆ ನೀಡಲಾಗಿತ್ತು.

ಇದೀಗ ಕೇಂದ್ರ ಸರ್ಕಾರ ನಾಲ್ಕನೇ ಹಂತದಲ್ಲೂ ಲಾಕ್ಡೌನ್ ವಿಸ್ತರಿಸುವ ಸೂಚನೆಯನ್ನು ನೀಡಿದೆ. ಅಲ್ಲದೆ ಕೊರೊನಾ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಹೈಕೋರ್ಟ್ ಗೆ ನೀಡಲಾಗಿದ್ದ ರಜೆಯನ್ನು ಜೂನ್ 6ರ ವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು ಪ್ರಧಾನ ಪೀಠ, ಕಲಬುರ್ಗಿ ಹಾಗೂ ಧಾರವಾಡ ಪೀಠಗಳಿಗೆ ಜೂನ್ 6 ರವರೆಗೆ ರಜೆ ಇರಲಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...