alex Certify ಗುಡ್ ನ್ಯೂಸ್: ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಇಳಿಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಇಳಿಮುಖ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ಗಣನೀಯವಾಗಿ ಇಳಿಯುತ್ತಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಕೊರೊನಾ ಅಟ್ಟಹಾಸದಿಂದ ತತ್ತರಗೊಂಡಿದ್ದ ದೇಶವಾಸಿಗಳು ಈಗ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 62,212 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 74,32,681 ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 837 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,12,998ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 7,95,087 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 65,24,596 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...