ಜಾನುವಾರುಗಳನ್ನು ಹೊಂದಿರುವ ರೈತರಿಗೆ ರಾಜ್ಯ ಸರ್ಕಾರ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಜಾನುವಾರುಗಳಿಗೆ ರೈತರ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗುತ್ತಿದೆ.
ಇದಕ್ಕಾಗಿ ಅತ್ಯಾಧುನಿಕ ಸುಸಜ್ಜಿತವಾದ 15 ಪಶುಚಿಕಿತ್ಸಾ ವಾಹನಗಳು ಸಿದ್ಧವಾಗುತ್ತಿದ್ದು, ಇದರಲ್ಲಿ ತುರ್ತು ಹಾಗೂ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್ ಮೊದಲಾದ ಸೌಲಭ್ಯಗಳು ಇರುತ್ತವೆ.
ದಿನದ 24 ಗಂಟೆಗಳ ಕಾಲ ಸೇವೆ ನೀಡುವ ಸಲುವಾಗಿ ಹೆಲ್ಪ್ ಲೈನ್ ಕೂಡಾ ಕಾರ್ಯ ನಿರ್ವಹಿಸಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ದಿನಾಂಕ ಪಡೆದು ಪಶು ಚಿಕಿತ್ಸಾ ವಾಹನಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.