
ಶಿವಮೊಗ್ಗ: ಜಿಲ್ಲಾ ಗೃಹರಕ್ಷಕದಳದ ಘಟಕಗಳಲ್ಲಿ ಖಾಲಿ ಇರುವ ಸೇವೆಗಳಿಗೆ ಆಯ್ಕೆಯಾಗುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಜನವರಿ 19ರಂದು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾ ಭವನದಲ್ಲಿ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಡಿಡಿಪಿಐ ಮತ್ತು ಜಿಲ್ಲಾ ಸಮಾದೇಷ್ಟರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಂದು ಬೆಳಗ್ಗೆ 9.30 ರಿಂದ ಸಂಜೆ 5 ರವರೆಗೆ ಹಾಜರಾಗಿ ನೋಂದಾಯಿಸಲು ಜಿಲ್ಲಾ ಸಮಾದೇಷ್ಟರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.