alex Certify ಗೋವಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋವಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಸಹೋದರ ಶಿವಕುಮಾರ್ ಪುತ್ರಿ ಡಾ. ಹಿತಾ ವಿವಾಹ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. ನಾಳೆ ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ಮದುವೆ ನೆರವೇರಲಿದೆ.

ಇವರ ವಿವಾಹ ಮಹೋತ್ಸವಕ್ಕೆ ಗಣ್ಯಾತಿ ಗಣ್ಯರು ಆಗಮಿಸಲಿದ್ದಾರೆ. ಶುಕ್ರವಾರ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಭಾಗಿಯಾಗುವ ಸಾಧ್ಯತೆ ಇದೆ.

ಈಗಾಗಲೇ ರಾಹುಲ್ ಹಾಗೂ ಸೋನಿಯಾ ಗಾಂಧಿ ಗೋವಾದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸೋನಿಯಾ ಗಾಂಧಿಯವರನ್ನು ಗೋವಾಗೆ ಕರೆತಂದಿದ್ದಾರೆ ರಾಹುಲ್ ಗಾಂಧಿ. ಹೀಗಾಗಿ ಶಾಸಕಿ ಪುತ್ರನ ಮದುವೆಯಲ್ಲಿ ಈ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.

ಇನ್ನು ಮೃಣಾಲ್ ಮತ್ತು ಡಾ.ಹಿತಾ ಮದುವೆಯಲ್ಲಿ ಭಾಗಿಯಾಗುತ್ತಿರೋದು ಕೆಲವೇ ಮಂದಿ ಮಾತ್ರ. ಕೊರೊನಾದಿಂದಾಗಿ ವಿವಾಹ ಆರತಕ್ಷತೆಯಲ್ಲಿ 500 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಹೀಗಾಗಿ ರಾಜಕೀಯ ಗಣ್ಯರು, ಸಿನಿಮಾ ಸ್ಟಾರ್ಸ್ ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...