ಗ್ರಾಮೀಣ ಪ್ರದೇಶದ ಜನತೆ ತುರ್ತು ಅನಾರೋಗ್ಯ ಸಂದರ್ಭಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೊರೆ ಹೋಗುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ವೈದ್ಯರು ಲಭ್ಯವಾಗುವುದೇ ದುಸ್ತರವಾಗುತ್ತದೆ.
ಇದೀಗ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ವರ್ಷದಿಂದ ಒಬ್ಬ ಪುರುಷ ಹಾಗೂ ಒಬ್ಬ ಮಹಿಳಾ ವೈದ್ಯರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಬೆಂಗಳೂರಿನಲ್ಲಿ ಈ ವಿಷಯ ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೆ 5 ಹೊಸ RTO ಕಚೇರಿ
ಗ್ರಾಮೀಣ ಪ್ರದೇಶಗಳಿಗೆ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳು ಬಹು ಮುಖ್ಯವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಬಜೆಟ್ ಭಾಷಣದಲ್ಲಿ ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಭರವಸೆ ನೀಡಿದ್ದಾರೆ ಎಂದು ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.