
ಕರ್ನಾಟಕ ಲೋಕಸೇವಾ ಆಯೋಗವು ಆಗಸ್ಟ್ 24ರ ಸೋಮವಾರದಂದು ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಸಿ ವೃಂದದ ಒಟ್ಟು 106 ಹುದ್ದೆಗಳ ಭರ್ತಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಿದೆ.
ಈ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ವೆಬ್ ಸೈಟ್ http://kpsc.kar.nic.in ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.