ಬೆಂಗಳೂರು: ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ದೇವಾಲಯವನ್ನು ಬಂದ್ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಕೆಲಸ ಮಾಡುವ 6 ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ದೇವಾಲಯವನ್ನು ಬಂದ್ ಮಾಡಲಾಗಿದೆ.
48 ಗಂಟೆಗಳ ಕಾಲ ಭಕ್ತರು ದೇವಾಲಯಕ್ಕೆ ಆಗಮಿಸದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಸ್ಯಾನಿಟೈಸ್ ಸೇರಿದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.