ಬೆಂಗಳೂರು: ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ರೈತರು ಕರೆ ನೀಡಿರುವ ಚಕ್ಕಾ ಜಾಮ್ ಹೋರಾಟಕ್ಕೆ ರಾಜ್ಯದ ರೈತರು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ಹೆದ್ದಾರಿಗಳು ಕೂಡ ಬಂದ್ ಆಗಲಿವೆ.
ನಾಳೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದು, ಮಧ್ಯಾಹ್ನ 12ಗಂಟೆಯಿಂದ 3 ಗಂಟೆಯವರೆಗೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ರೈತ ಸಂಘಟನೆ ನಿರ್ಧರಿಸಿದೆ.
ಯಡಿಯೂರಪ್ಪನವರಿಗೆ ಡ್ರೈವಿಂಗೂ ಬರುತ್ತಿಲ್ಲ – ಬ್ರೇಕ್ ಹಾಕಲೂ ಆಗುತ್ತಿಲ್ಲ; ಸಿದ್ದರಾಮಯ್ಯ ವ್ಯಂಗ್ಯ
ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ ಬಂದ್ ಆಗಲಿದೆ.
ಬೆಂಗಳೂರು-ಮೈಸೂರು, ಬಿಡದಿ-ಮಂಡ್ಯ ರಾಜ್ಯ ಹೆದ್ದಾರಿ
ರಾಯಚೂರು ಅಸ್ಕಿಹಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ
ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು-ಗೋವಾ ರಾಷ್ಟ್ರೀಯ ಹೆದ್ದಾರಿ
ಪುಣಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು -ಮಾಗಡಿ ರಸ್ತೆ ರಾಜ್ಯ ಹೆದ್ದಾರಿ
ಬೆಂಗಳೂರು-ಶಿವಮೊಗ್ಗ ರಾಜ್ಯ ಹೆದ್ದಾರಿ