ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಚಕ್ಕಾ ಜಾಮ್ ಹೋರಾಟಕ್ಕೆ ರಾಜ್ಯ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ರಾಜ್ಯದಲ್ಲೂ ಹೆದ್ದಾರಿ ತಡೆ ನಡೆಸಲಾಗುತ್ತಿದೆ.
ರೈತರ ಪ್ರತಿಭಟನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಪ್ರತಿಭಟನಾ ಸ್ಥಳಗಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆ ಏರ್ಪಡಿಸಲಾಗಿದೆ. ಇನ್ನು ಪೊಲೀಸರು ಪ್ರತಿಭಟನಾಕಾರರಿಗೆ ಹಲವು ಷರತ್ತುಗಳನ್ನು ಹಾಕಿದ್ದಾರೆ.
* ಪ್ರತಿಭಟನೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡುವಂತಿಲ್ಲ
* ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಯಾದರೆ ಆಯೋಜಕರೇ ಹೊಣೆ
* ಜನಸಾಮಾನ್ಯರಿಗೆ ತೊಂದರೆಯಾಗದಂತೆ ವರ್ತಿಸಬೇಕು
* ಕಾನೂನು ಸುವ್ಯವಸ್ಥೆಗೆ ದಕ್ಕೆಯುಂಟುಮಾಡುವಂತಿಲ್ಲ
* ಪ್ರತಿಭಟನೆ ವೇಳೆ ಪೊಲೀಸರ ಸಲಹೆ-ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು