alex Certify ಚಲಿಸುತ್ತಿದ್ದ ಕಾರಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಕಾರಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

Image result for fire

ಚಿತ್ರದುರ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಕಾರಿನ ಮೇಲೆ ಆಸಿಡ್ ದಾಳಿ ನಡೆಸಿದ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದಿದೆ.

ಕೆಲಸದ ನಿಮಿತ್ತ ಚಿತ್ರದುರ್ಗಕ್ಕೆ ಬಂದಿದ್ದ ವೇಣುಗೋಪಾಲ್ ಎಂಬುವವರ ಮೇಲೆ ಆಂಧ್ರಪ್ರದೇಶದಿಂದ ಬಂದಿದ್ದ ದುಷ್ಕರ್ಮಿಗಳು ಈ ದಾಳಿ ನಡೆಸಿದ್ದಾರೆ. ಮೊಳಕಾಲ್ಮೂರು ಸುಕೇನಹಳ್ಳಿ ಬಳಿ ವೇಣುಗೋಪಾಲ್ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ವೇಣುಗೋಪಾಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಪಾನ್‌: ಫುಕುಶಿಮಾದಲ್ಲಿ 7.1 ತೀವ್ರತೆಯ ಭೂಕಂಪನ, ಸುನಾಮಿ ಸಾಧ್ಯತೆ ಇಲ್ಲ

ಆಂಧ್ರಪ್ರದೇಶದ ಹಿಂದುಪುರ ಮೂಲದ ಸುರೇಶ್ ಮತ್ತು ಆತನ ಸಹಚರರಿಂದ ಈ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...