ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆ ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಚಳಿ – ಮಳೆಗೂ ಜಗ್ಗದೆ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ರೈತ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ.
ಸೆಪ್ಟೆಂಬರ್ 25ರ ಶುಕ್ರವಾರ ದಂದು ‘ಕರ್ನಾಟಕ ಬಂದ್’ ಗೆ ಕರೆ ಕೊಡುವ ಸಾಧ್ಯತೆ ಇದ್ದು, ಇದಕ್ಕೆ ಈಗಾಗಲೇ ರಾಜ್ಯದ ಹಲವು ಪ್ರಮುಖ ಸಂಘಟನೆಗಳು ಬೆಂಬಲ ಸೂಚಿಸಿವೆ.