ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 24 ಕೊರೊನಾ ಸೋಂಕಿತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ.
ಮೇ 2ರಂದು ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ 24 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದರು. ಮೃತರ ಕುಟುಂಬಕ್ಕೆ ಸರ್ಕಾರ ತಲಾ 2 ಲಕ್ಷರೂಪಾಯಿ ಪರಿಹಾರ ಘೋಷಿಸಿತ್ತು. ಅದರಂತೆ ಇದೀಗ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ.
ಸರ್ಕಾರಿ ಬ್ಯಾಂಕ್ ಸಿಬ್ಬಂದಿಗೆ ಭರ್ಜರಿ ಖುಷಿ ಸುದ್ದಿ….!
ಪರಿಹಾರಕ್ಕಾಗಿ ರಾಜ್ಯ ಸರ್ಕಾರ 48 ಲಕ್ಷ ರೂಪಾಯಿ ಹಣವನ್ನು ಜಿಲ್ಲಾಧಿಕಾರಿ ಖಾತೆಗೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.