ಚೀನಾದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ವಿಶ್ವದಲ್ಲೆಡೆ ವ್ಯಾಪಿಸಿದ್ದು, ಸೋಂಕು ತಗುಲದ ನಗರಗಳೇ ಇಲ್ಲ ಎಂಬ ಪರಿಸ್ಥಿತಿ ತಲೆದೋರಿದೆ. ಇದರ ಮಧ್ಯೆಯೂ ಬೆರಳೆಣಿಕೆಯ ನಗರಗಳಲ್ಲಿ ಕೊರೊನಾ ಇನ್ನೂ ವಕ್ಕರಿಸಿಲ್ಲ.
ಕರ್ನಾಟಕದಲ್ಲಿ ಚಾಮರಾಜನಗರ ಜಿಲ್ಲೆಯನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ನಗರಗಳಲ್ಲೂ ವ್ಯಾಪಿಸಿದ್ದು, ಅದರಲ್ಲೂ ಉಡುಪಿ ಸೋಂಕಿತರ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ.
ಚಾಮರಾಜನಗರ ಜಿಲ್ಲೆ, ಕೇರಳ ಹಾಗೂ ತಮಿಳುನಾಡು ಗಡಿಗೆ ಹೊಂದಿಕೊಂಡಿದ್ದರೂ ಅಲ್ಲಿನ ಜಿಲ್ಲಾಡಳಿತ ಕೈಗೊಂಡ ಕಟ್ಟುನಿಟ್ಟಿನ ಕ್ರಮದಿಂದಾಗಿ ಸೋಂಕು ರಹಿತ ಜಿಲ್ಲೆ ಎಂಬ ಹೆಗ್ಗಳಿಕೆ ಹೊಂದಿದೆ.
ಹೀಗಾಗಿ ಸ್ವತಃ ಕೇಂದ್ರ ಸಚಿವ ಡಾ. ಹರ್ಷವರ್ಧನ್ ಅವರೇ ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ ಕರೆಮಾಡಿ ಅಭಿನಂದಿಸಿದ್ದಾರೆ ಎಂದು ತಿಳಿದುಬಂದಿದೆ.