ಮೈಸೂರು: ದಸರಾ ಹಿನ್ನೆಲೆಯಲ್ಲಿ ಇಂದಿನಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶಕ್ಕೆ ಅವಕಾಶ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕೊರೊನಾ ಹಿನ್ನಲೆಯಲ್ಲಿ ಅ.17ರಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ಇದೀಗ ನಿರ್ಬಂಧ ತೆರವುಗೊಳಿಸಲಾಗಿದ್ದು, ಇಂದಿನಿಂದ ನ.1ರವರೆಗೂ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾ ಆಚಣೆ ನಡೆಯಲಿದೆ. ಇನ್ನು ಅರಮನೆ ನಗರಿ ಮೈಸೂರು ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇಂದಿನಿಂದ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ಕಲ್ಪಿಸಿರುವುದರಿಂದ ಕೊರೊನಾ ಸೋಂಕು ಹೆಚ್ಚುವ ಭೀತಿ ಎದುರಾಗಿದೆ.