ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ವಪಕ್ಷ ಸಭೆ ಕರೆದು ಚರ್ಚಿಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದೇ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದೇ ಸರ್ಕಾರ ಯಾವ ಸಭೆ ನಡೆಸಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
ಸರಣಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ ಎಂದಿದ್ದಾರೆ.
ರಾಜ್ಯದಲ್ಲಿ ಲಾಕ್ಡೌನ್ ಜಾರಿ ಬಗ್ಗೆ ಸುಳ್ಳು ಸುದ್ದಿ ಹರಿಬಿಟ್ರೆ ಕ್ರಮ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ
ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.