ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದೊಂದು ನಿರುತ್ಸಾಹದ ಬಜೆಟ್ ಎಂದು ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ದೇಶದ ಇತಿಹಾಸದಲ್ಲೇ ಇಂಥಹ ನಿರುತ್ಸಾಹದ ಬಜೆಟ್ ಇನ್ನೊಂದಿಲ್ಲ. ಬಜೆಟ್ ಮೂಲಕ ಎಲ್ಲವನ್ನೂ ಮಾರಾಟಕ್ಕಿಟ್ಟಿದ್ದಾರೆ. 20 ಲಕ್ಷ ಕೋಟಿಯಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಎಂಬ ಬಗ್ಗೆ ಸ್ಪಷ್ಟನೆ ನಿಡಿಲ್ಲ ಎಂದು ಹೇಳಿದರು.
ಕೇಂದ್ರ ಬಜೆಟ್: 75 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ತೆರಿಗೆ ವಿನಾಯಿತಿ
ಜನಸಾಮಾನ್ಯರಿಗೆ ಹೊರೆಯಾದ ಬಜೆಟ್ ಇದಾಗಿದ್ದು, ಮುಂದಿನ ದಿನಗಳಲ್ಲಿ ನಿರುದ್ಯೋಗ, ದರೋಡೆ, ಕಳ್ಳತನದಂತಹ ಪ್ರಕರಣ ಹೆಚ್ಚಿ ಕಾನೂನು ಸುವ್ಯವಸ್ಥೆ ಹದಗೆಡಲಿದೆ ಎಂದು ಕಿಡಿಕಾರಿದ್ದಾರೆ.