alex Certify ಜಮೀರ್ ಹೇಳಿದಂತೆ ಕೇಳಲು ಅವರ್ಯಾರ್ರೀ ಎಂದ ಸಿಎಂ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀರ್ ಹೇಳಿದಂತೆ ಕೇಳಲು ಅವರ್ಯಾರ್ರೀ ಎಂದ ಸಿಎಂ…!

ಬೆಂಗಳೂರಿನ ಪಾದರಾಯನಪುರದಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಜೊತೆ ತುರ್ತು ಸಭೆ ನಡೆಸಿದ್ದಾರೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪನವರು, ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಕರೋನಾ ಸೋಂಕು ಪೀಡಿತ ಶಂಕಿತರನ್ನು ವಶಕ್ಕೆ ಪಡೆದು ಕ್ವಾರಂಟೈನ್ ಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪಾದರಾಯನಪುರಕ್ಕೆ ಹೋಗುವ ಮುನ್ನ ತಮ್ಮ ಗಮನಕ್ಕೆ ವಿಷಯ ತರಬೇಕಿತ್ತೆಂದು ಶಾಸಕ ಜಮೀರ್ ಅಹಮದ್ ನೀಡಿರುವ ಹೇಳಿಕೆ ಕುರಿತಂತೆ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಯಡಿಯೂರಪ್ಪನವರು, ಜಮೀರ್ ಅಹಮದ್ ಅವರ ಗಮನಕ್ಕೆ ತರಲು ಅವರು ಯಾರು. ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಸರ್ಕಾರಕ್ಕೆ ತಿಳಿದಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...