alex Certify ಜಾಮೀನು ಅರ್ಜಿ ಹಿಂಪಡೆದ ಅಮೂಲ್ಯ ಲಿಯೋನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಮೀನು ಅರ್ಜಿ ಹಿಂಪಡೆದ ಅಮೂಲ್ಯ ಲಿಯೋನ್

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹೋರಾಟದ ವೇಳೆ ಬಹಿರಂಗ ಸಭೆಯಲ್ಲೇ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಕಳುಹಿಸಲಾಗಿದೆ.

ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ಅಮೂಲ್ಯ ಲಿಯೋನ್ ಬಳಿಕ ಅದನ್ನು ಹಿಂಪಡೆದುಕೊಂಡಿದ್ದಾರೆ. ಸರ್ಕಾರಿ ಅಭಿಯೋಜಕರು, ಆರೋಪಿ, ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸದೆ ನೇರವಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವುದಕ್ಕೆ ಆಕ್ಷೇಪಿಸಿದ್ದರು.

ಆಗ ಅಮೂಲ್ಯ ಲಿಯೋನ್ ಪರ ವಕೀಲರು ಅರ್ಜಿ ಹಿಂಪಡೆಯಲು ಅನುಮತಿ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದು, ಇದಕ್ಕೆ ಸಮ್ಮತಿಸಿದ ನ್ಯಾಯಪೀಠ, ಸೆಷನ್ಸ್ ನ್ಯಾಯಾಲಯದಲ್ಲಿ ಪರಿಹಾರ ಸಿಗದಿದ್ದರೆ ಆ ಬಳಿಕ ಹೈಕೋರ್ಟ್ ಮೊರೆ ಹೋಗಬಹುದು ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...