ಮೈಸೂರು: ಮೈಸೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜನರೇಟರ್ ಸ್ಫೋಟಗೊಂಡ ಪರಿಣಾಮ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಜನರೇಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ರಭಸಕ್ಕೆ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಜನರೇಟರ್ ದುರಸ್ತಿ ಕಾರ್ಯ ನಡೆದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.