ರಾಜ್ಯದಲ್ಲಿ ವ್ಯಾಪಕವಾಗಿರುವ ಕೊರೊನಾ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರು ತಮ್ಮ ಜೀವದ ಹಂಗನ್ನು ತೊರೆದು ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಪೌರ ಕಾರ್ಮಿಕರ ಸೇವೆ ಅನನ್ಯವಾಗಿದ್ದು, ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಸಂದರ್ಭದಲ್ಲೂ ಅದನ್ನು ಲೆಕ್ಕಿಸದೆ ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹೀಗಾಗಿಯೇ ಕೆಲವು ಪ್ರದೇಶಗಳಲ್ಲಿ ಅವರುಗಳ ಮೇಲೆ ಪುಷ್ಪಗುಚ್ಛ ಮಾಡಿ ಗೌರವ ಸಲ್ಲಿಸಲಾಗಿತ್ತು.
ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದ ಪೌರ ಕಾರ್ಮಿಕರು, ಮಹಿಳೆಯೊಬ್ಬರ ಬಳಿ ನೀರು ಕೇಳಿದ ಸಂದರ್ಭದಲ್ಲಿ ಆ ಮಹಿಳೆ, ನಿಮ್ಮಿಂದಲೇ ಕೊರೊನಾ ಹರಡುತ್ತದೆ ಎಂಬ ರೀತಿಯಲ್ಲಿ ಮಾತನಾಡಿರುವುದಲ್ಲದೇ ನೀರಿನ ಬಾಟಲ್ ಅನ್ನು ನಡುರಸ್ತೆಯಲ್ಲಿ ಇಟ್ಟಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಹಿಳೆಯ ವರ್ತನೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.
https://www.facebook.com/kiran.gajnur/videos/3590592330957748