ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ಸಮಾನತೆ ಹಾಗೂ ಅಸ್ಪೃಶ್ಯತೆ ನಿವಾರಣೆಗೆ ಹೋರಾಡಿದ ಮಹಾನ್ ವ್ಯಕ್ತಿ. ಇವರ ಕುರಿತು ಧಾರಾವಾಹಿಯೊಂದು ಜಿ ಕನ್ನಡ ವಾಹಿನಿಯಲ್ಲಿ ಜುಲೈ 4 ರಿಂದ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿದೆ.
ಜೀ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್ ಆದ ರಾಘವೇಂದ್ರ ಹುಣಸೂರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಧಾರಾವಾಹಿ ಪ್ರೇಕ್ಷಕರಿಗೆ ಮಾಹಿತಿಗಳನ್ನು ನೀಡುವುದರ ಜೊತೆಗೆ ಎಲ್ಲರ ಮನಸ್ಸಿಗೆ ಮುಟ್ಟುತ್ತದೆ ಎಂದು ಹೇಳಿದ್ದಾರೆ.